ತುಮಕೂರಿನ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಹಾಗೂ ಶಿವಶ್ರೀ ಸೌಹಾರ್ದ ಪತ್ತಿನ ಸಹಕಾರ ಸಂಘದಿಂದ ಸಂಘದ ಸಭಾಂಗಣದಲ್ಲಿ ಮಂಗಳವಾರ ವೀರಶೈವ ಸಮಾಜ ಸೇವಾ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಎಸ್.ಮಂಜುನಾಥ್, ಉಪಾಧ್ಯಕ್ಷ ಟಿ.ಬಿ.ಹರೀಶ್ ಹಾಗೂ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ, ಶಿವಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಿ.ಎಸ್.ಸಿದ್ಧರಾಜು, ಉಪಾಧ್ಯಕ್ಷ ಟಿ.ಎಸ್.ಕರುಣಾರಾಧ್ಯ ಹಾಗೂ ನಿರ್ದೇಶಕರು, ಸಿಬ್ಬಂದಿ ಭಾಗವಹಿಸಿದ್ದರು.
