ತುಮಕೂರು ವಿಶ್ವವಿದ್ಯಾನಿಲಯದ ೧೯ನೇ ವಾರ್ಷಿಕ ಘಟಿಕೋತ್ಸವವು ದಿನಾಂಕ: ೦೩-೦೬-೨೦೨೬ರಂದು ಬುಧವಾರ ಬೆಳಗ್ಗೆ ೧೧-೩೦ ಗಂಟೆಗೆ ಕುಲಪತಿಗಳ ಕಛೇರಿ ಮುಂಭಾಗದ ಕ್ರೀಡಾಂಗಣದಲ್ಲಿ ಜರುಗಲಿದೆ.
ಕರ್ನಾಟಕದ ಘನತೆವೆತ್ತ ರಾಜ್ಯಪಾಲರೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟಿçÃಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು, ಇದರ ನಿರ್ದೇಶಕರಾದ ಪ್ರೊ. ದೇಬಬ್ರತ ದಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ನೆರವೇರಿಸಲಿರುವರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ ಶ್ರೀಮತಿ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಮೋಹನ ಹೆಚ್. ಎಸ್., ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಭಾಗವಹಿಸುವರು.
ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, ೫೯ ಅಭ್ಯರ್ಥಿಗಳು ಪಿಎಚ್.ಡಿ. ಪದವಿ, ೨,೦೫೮ ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ ೮,೭೮೧ ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು ೧೦,೮೩೯ ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ್ಯಾಂಕುಗಳನ್ನು (ಎಂಎಸ್ಸಿ ವಿದ್ಯುನ್ಮಾನ ಮಾಧ್ಯಮ- ೨ ರ್ಯಾಂಕ್), ಬಿಎ/ಬಿಎಸ್ಡಬ್ಲೂö್ಯ/ಬಿಎಸ್ಸಿ/ಬಿಕಾಂ/ಬಿಬಿಎA/ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ್ಯಾಂಕುಗಳನ್ನು (ಬಿಎಸ್ಸಿ ಫ್ಯಾಶನ್ ಅಂಡ್ ಅಪಾರೆಲ್ ಡಿಸೈನಿಂಗ್- ೧ ರ್ಯಾಂಕ್, ಬಿ.ವೋಕ್ – ೩ ರ್ಯಾಂಕ್) ಘೋಷಿಸಿದೆ. ಒಟ್ಟು ೯೦ ವಿದ್ಯಾರ್ಥಿಗಳಿಗೆ ೧೧೭ ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ.
ಘಟಿಕೋತ್ಸವಕ್ಕೂ ಮುನ್ನ ಮಾನ್ಯ ರಾಜ್ಯಪಾಲರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ‘ತುಮಕೂರು ಇನ್ನೋವೇಶನ್ ಇನ್ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್ಶಿಪ್ ಕೌನ್ಸಿಲ್’ ಹಾಗೂ ‘ಗೋ ಗ್ರೀನ್ – ಬೈಸಿಕಲ್ ಇನೀಶಿಯೇಟಿವ್’ಗಳನ್ನು ಉದ್ಘಾಟಿಸಲಿದ್ದಾರೆ.
