ಬೇಡಿಕೆಗನುಗುಣವಾಗಿ ರಸಗೊಬ್ಬರ/ಬಿತ್ತನೆ ಬೀಜ ದಾಸ್ತಾನು : ಜಿಲ್ಲಾಧಿಕಾರಿ ಸೂಚನೆ
ತುಮಕೂರು(ಕ.ವಾ)ಏ.೧೮: ಮುಂಗಾರು ಹಂಗಾಮಿಗೆ ಜಿಲ್ಲೆಗೆ ಬೇಡಿಕೆ ಇರುವ ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ದಾಸ್ತಾನಿಕರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸರಬರಾಜುದಾರರಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ೨೦೨೬ರ ಮುಂಗಾರು ಹಂಗಾಮು ಪೂರ್ವ ಸಿದ್ದತೆ ಸಂಬAಧ ರಸಗೊಬ್ಬರ ಮತ್ತು ಬಿತ್ತನೆ ಬೀಜ ಸರಬರಾಜುದಾರರು, ಮಾರಾಟಗಾರರು ಹಾಗೂ ದಾಸ್ತಾನು ವಿತರಣೆ ಸಂಬAಧ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ವಿತರಣೆ ಸಮಯದಲ್ಲಿ ಕೃತಕ ಅಭಾವ ಸೃಷ್ಟಿಯಾಗದಂತೆ, ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ರಸಗೊಬ್ಬರ ವಿತರಿಸಬೇಕೆಂದು ತಿಳಿಸಿದ ಅವರು, ರಸಗೊಬ್ಬರ ಮಾರಾಟದಲ್ಲಿ ಉಲ್ಲಂಘನೆ ಕಂಡು ಬಂದಲ್ಲಿ ಸಂಬAಧಪಟ್ಟ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಂದುವರೆದು ಯೂರಿಯಾ ರಸಗೊಬ್ಬರ ವಿತರಣೆಯನ್ನು ಕೆ-ಕಿಸಾನ್ ತಂತ್ರಾAಶದ ಮೂಲಕ ರೈತರ ಈಖUIಖಿS ಈIಆ ಬಳಸಿ ಕಡ್ಡಾಯವಾಗಿ ಯೂರಿಯಾ ವಿತರಿಸಬೇಕೆಂದು ಹಾಜರಿದ್ದ ಮಾರಾಟಗಾರರಿಗೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ನ್ಯಾನೋ ಯೂರಿಯಾ, ನ್ಯಾನೋ ಡಿ.ಎ.ಪಿ. ಹಾಗೂ ಸಮತೋಲನಾ ಗೊಬ್ಬರ ಬಳಕೆ ಮತ್ತು ಉಪಯುಕ್ತತೆ ಬಗ್ಗೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಲಕ್ಷö್ಮಣ್ ಎಸ್., ತೋಟಗಾರಿಕೆ ಉಪನಿರ್ದೇಶಕಿ ಶಾರದಮ್ಮ ಸೇರಿದಂತೆ ಗೊಬ್ಬರ ವಿತರಕರು, ಬೆಳೆ ವಿಮೆದಾರರು ಹಾಗೂ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರುಗಳು ಭಾಗವಹಿಸಿದ್ದರು.
