ಹಿಂದೂ ಜನಜಾಗೃತಿ ಸಮಿತಿಯಿಂದ ಕುಣಿಗಲ್ ತಾಲೂಕಿನಲ್ಲಿ ವಿಶೇಷ ಪ್ರವಚನದ ಆಯೋಜನೆ
ತುಮಕೂರು-ಕುಣಿಗಲ್ : ಧರ್ಮವೇ ನಮ್ಮ ದೇಶದ ಮೂಲವಾಗಿದೆ, ಇಂದು ಹಿಂದೂಗಳಿಗೆ ಧರ್ಮಶಿಕ್ಷಣ ಲಭಿಸದೆ, ಸಮಾಜವು ಅದೋಗತಿಯೆಡೆಗೆ ಸಾಗುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬ ಹಿಂದೂವೂ ಧರ್ಮಶಿಕ್ಷಣ ಪಡೆದು ಧರ್ಮಚರಣೆಯನ್ನು ಮಾಡುವ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಟ್ಟಿಬದ್ಧರಾಗಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂಜ್ಯ ರಮಾನಂದ ಗೌಡ ಇವರು ಕರೆ ನೀಡಿದರು, ಅವರು ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ ದಿನಾಂಕ 24..12.2025 ರಂದು ಕುಣಿಗಲ್ ನ ಪತಂಜಲಿ ನಗರಿದಲ್ಲಿನ ದಿವ್ಯ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಧರ್ಮಜಾಗೃತಿ ಪ್ರವಚನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ 60 ಕ್ಕೂ ಅಧಿಕ ಹಿಂದೂ ಬಾಂಧವರು ಉಪಸ್ಥಿತರಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶಶಿಧರ್ ಆಚಾರ್ಯ ಇವರು ಹಿಂದೂ ಜನಜಾಗೃತಿ ಸಮಿತಿಯ ಸ್ಥಾಪನೆ, ಕಾರ್ಯ ಮತ್ತು ಹಿಂದೂ ಸಮಾಜವು ಸದ್ಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ವಿವರಿಸಿದರು.

ಬಾಂಗ್ಲಾದೇಶದ ಮೈಮನ್ಸಿಂಗ್ ಪ್ರದೇಶದಲ್ಲಿ ನಡೆದ ಅಮಾನವೀಯ ಘಟನೆಯನ್ನು ಉಲ್ಲೇಖಿಸಿ, ಹಿಂದೂ ಸಹೋದರ ದೀಪು ಚಂದ್ರ ದಾಸ್ ಅವರನ್ನು ಮತೀಯ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿಯೇ ಬೆಂಕಿಗೆ ಆಹುತಿಗೊಳಿಸಿದ ಘಟನೆ ಮಾನವತೆಯೇ ತಲೆತಗ್ಗಿಸುವಂತದ್ದು ಎಂದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಬಾಂಗ್ಲಾದೇಶದ ಮೇಲೆ ಆರ್ಥಿಕ, ವ್ಯಾಪಾರಿಕ ಮತ್ತು ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕು, ಎಂದು ಅವರು ಆಗ್ರಹಿಸಿದರು.
ಹಿಂದೆ ಗುರುವಿನ ಮೂಲಕ ಜ್ಞಾನವನ್ನು ಪಡೆದು ಶಿಷ್ಯರು ಸಾಧನೆಯನ್ನು ಮಾಡುತ್ತಿದ್ದರು. ಭಾರತದಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಹಕ್ಕ ಬುಕ್ಕರು ಸಹ ತಮ್ಮ ರಾಜ್ಯ ಸ್ಥಾಪನೆಯನ್ನು ಮಾಡುವಾಗ ಗುರುಗಳ ಮಾರ್ಗದರ್ಶನ ಪಡೆದು ಮಾಡಿದರು. ಇದರಿಂದಾಗಿ ಅವರ ಧರ್ಮಸಂಸ್ಥಾಪನೆಯ ಕಾರ್ಯವು ಪೂರ್ಣವಾಯಿತು. ಪ್ರಸ್ತುತ ಕಾಲದಲ್ಲಿ ಅನೇಕ ದಾರ್ಶನಿಕರು, ಸಂತರು ಮತ್ತು ಸ್ವತಃ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರೂ ಸಹ ಭಾರತದಲ್ಲಿ ಆದರ್ಶ ರಾಮರಾಜ್ಯದ ಸ್ಥಾಪನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾಗಿ ನಾವು ಈ ರಾಮ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಸಹಭಾಗಿ ಆಗಬೇಕಾದರೆ ಗುರುಗಳ ಮಾರ್ಗದರ್ಶನ ಪಡೆದು ಕಾರ್ಯ ಮಾಡಬೇಕಿದೆ. ಕೊನೆಗೆ ಅವರು “ಧರ್ಮೋ ರಕ್ಷತಿ ರಕ್ಷಿತಃ” ಅಂದರೆ ಧರ್ಮ ಉಳಿಯಬೇಕಾದರೆ ನಾವೆಲ್ಲ ಹಿಂದೂಗಳು ಧರ್ಮಚರಣೆಯನ್ನು ಮಾಡಬೇಕು ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಹೆಚ್ಚಿಸಬೇಕು ಎಂದರು.
