ವಿಶ್ವ ಯುವ ಸಂಸತ್ ಸಮಾವೇಶದಲ್ಲಿ ವಿವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಭಾಗಿ
ತುಮಕೂರು: ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ನಡೆದ ವಿಶ್ವ ಯುವ ಸಂಸತ್ – ೨೦೨೬ ಅಂತರಾಷ್ಟಿçÃಯ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿಗಳಾದ ಐಶ್ವರ್ಯ ಆರ್. ಮತ್ತು ಭೂಮಿಕಾ ಪಿ.ಎಂ. ಅವರು ಯುವ ಪ್ರತಿನಿಧಿಗಳಾಗಿ ಪಾಲ್ಗೊಂಡಿದ್ದರು.
ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್ ಎಸ್ ಎಸ್ ಕೋಶ ಹಾಗೂ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ ೨೪ ರಿಂದ ೨೬ ರವರೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಯುವ ಮನಸ್ಸುಗಳು: ಸುಸ್ಥಿರ ಭವಿಷ್ಯ ಮತ್ತು ಜಾಗತಿಕ ಪ್ರಭಾವ ಎಂಬ ಶೀರ್ಷಿಕೆಯಡಿ ನಡೆದ ಈ ಜಾಗತಿಕ ಸಮ್ಮೇಳನದಲ್ಲಿ ಭೂಮಿಕಾ ಪಿ. ಎಂ ಮತ್ತು ಐಶ್ವರ್ಯ ಅವರು ಸಕ್ರಿಯವಾಗಿ ಭಾಗವಹಿಸಿ ಗಮನ ಸೆಳೆದಿದ್ದಾರೆ.
ಯುವಜನತೆಗೆ ಸಂಬAಧಿಸಿದ ಜಾಗತಿಕ ಸಮಸ್ಯೆಗಳು ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಿದ್ದಾರೆ.
