*40ನೇ ಪತ್ರಕರ್ತರ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ
-ಕೆವಿಪಿ ಕರೆ.
ರಭಸದಲ್ಲಿರುವ ಮಾಧ್ಯಮ ಕ್ಷೇತ್ರಕ್ಕೆ ಪಿಟ್ ಸ್ಪಾಟ್ ಗಳ ಅಗತ್ಯವಿದೆ: ಕೆ.ವಿ.ಪ್ರಭಾಕರ್ ಅಭಿಮತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರತ್ತೆ: ಕೆ.ವಿ.ಪ್ರಭಾಕರ್ ಭರವಸೆ
ಬೀದರ್ ಫೆ 23: ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ
ಕೆ.ವಿ.ಪಿ ಕರೆ ನೀಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು.
ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ
ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಮ್ಮೇಳನಗಳು ಒಂದು ಅರ್ಥದಲ್ಲಿ “ಪಿಟ್ ಸ್ಟಾಪ್ಸ್” ಎಂದು ಹೇಳಬಹುದು.
ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ.
ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ ಉದ್ಯಮಕ್ಕೆ ಈಗ ಇಂಥಾ ಪಿಟ್ ಸ್ಟಾಪ್ಸ್ ಗಳ ಅಗತ್ಯ ತುಂಬ ಇದೆ ಎಂದು ವಿವರಿಸಿದರು.
ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು ಮತ್ತು ವೃತ್ತಿಪರತೆಯನ್ನು ತೀಕ್ಷ್ಣಗೊಳಿಸಿಕೊಳ್ಳಲು ಮತ್ತು ಅವರ ಆಂತರಿಕ ದಿಕ್ಸೂಚಿಯನ್ನು ಮರು ಚಿಂತನಗೆ ಒಳಪಡಿಸಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ ಎನ್ನುವ ಭರವಸೆ ಇದೆ ಎಂದು ಆಶಿಸಿದರು.
ಕೃತಕ ಬುದ್ದಿಮತ್ತೆ ತಂತ್ರಜ್ಞಾನ-ಚಾಲಿತ ಯುಗದಲ್ಲಿ ನಮ್ಮ ಕೌಶಲ್ಯಗಳನ್ನು ನವೀಕರಣಗೊಳಿಸಿಕೊಳ್ಳುವುದರ ಜೊತೆಗೆ
ಪತ್ರಿಕೋದ್ಯಮದ ಆದ್ಯತೆಗಳನ್ನೂ ಮರು ಪರಿಶೀಲನೆಗೆ ಚರ್ಚೆಗೆ ಒಳಪಡಿಸಬೇಕಿದೆ.
ಇವತ್ತಿನ ತಾಂತ್ರಿಕ ವೇಗ ಮತ್ತು ಹೊಸ ಹೊಸ ತಂತ್ರಜ್ಞಾನದ ವೇಗದಲ್ಲಿ ಬಹುತೇಕ ಪ್ರತಿ ಐದು ವರ್ಷಗಳಿಗೆ ಒಮ್ಮೆ ನಾವು ಕಲ್ಪಿಸಕೊಳ್ಳಲಾಗದ ತಂತ್ರಜ್ಞಾನ ಹೊರಗೆ ಬರುತ್ತಿವೆ. ಹೊಸದಾಗಿ ಬಂದಿರುವ AI ತಂತ್ರಜ್ಞಾನದ ಸಾಧ್ಯತೆಗಳನ್ನು ಮತ್ತು ಅಪಾಯಗಳನ್ನು ನಾವು ಸರಿಯಾಗಿ ಗ್ರಹಿಸವ ಮೊದಲೇ ಹೊಸ ತಂತ್ರಜ್ಞಾನ ಬಂದಿರುತ್ತದೆ. ಈಗಾಗಲೇ AI ಕೂಡ ಹಳತಾಗಿ “Super AI” ಅಂತ ಬರುತ್ತಿದೆ ಎಂದು ಎಚ್ಚರಿಸಿದರು.
ಇವೆಲ್ಲವನ್ನೂ ಅರಿಯುವ ಮತ್ತು ಅಪಾಯಗಳನ್ನು ತಡೆಯುವ ಕಾರ್ಯಾಗಾರವಾಗಿ ಈ ಬಾರಿಯ ಸಮ್ಮೇಳ
2026 ಬಜೆಟ್ ನಲ್ಲೂ ಬಂಪರ್
ಪತ್ರಕರ್ತ ಸಮುದಾಯಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್ ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮಅನುಕೂಲಗಳು ಆಗುವ ಭರವಸೆ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಸನ್ಮಾನ್ಯ ಶ್ರೀ ಪ್ರಭಾಕರ್ ರವರು ತಿಳಿಸಿದರು
*ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ರಹೀಮ್ ಖಾನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಜಿಲ್ಲಾಧ್ಯಕ್ಷರಾದ ರಾಜ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ-ಹಿರಿಯ ಪತ್ರಕರ್ತರು ನಾಗರಾಜು.
