ಕೈಗಾರಿಕಾ ಬೆಳವಣಿಗೆಗೆ ತಂತ್ರಜ್ಞಾನ ಅಗತ್ಯ – ಡಾ.ಜಿ.ಪರಮೇಶ್ವರ
ತುಮಕೂರು(ಕ.ವಾ.) ಮೇ.೨೨: ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳಿಂದ ಸರ್ಕಾರದ ಆರ್ಥಿಕ ವ್ಯವಸ್ಥೆಗೆ ಸುಮಾರು ಶೇ.೩೦ರಷ್ಟು ಕೊಡುಗೆ ಸಿಗುತ್ತಿದೆ. ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ತಂತ್ರಜ್ಞಾನ ಅಳವಡಿಕೆ ಅತ್ಯಂತ ಅಗತ್ಯ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ನಡೆದ ದಕ್ಷಿಣ ಭಾರತ ಒSಒಇ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದ ಅವರು, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ವಸಂತ ನರಸಾಪುರ ಕೈಗಾರಿಕಾ ಹಬ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು. ತುಮಕೂರಿನಲ್ಲಿ ಮುಂದಿನ ವರ್ಷಗಳಲ್ಲಿ ಹೆಲಿಕಾಪ್ಟರ್ ಮ್ಯಾನುಫ್ಯಾಕ್ಚರಿಂಗ್ ಆರಂಭವಾಗುವ ಸಾಧ್ಯತೆ ಇದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಕೈಗಾರಿಕೆಗಳಿಗಾಗಿ ೩೦೦ ಎಕರೆ ಜಾಗವನ್ನು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ ಅವರು, ಕೆಎಸ್ಸಿಎ ಕ್ರಿಕೆಟ್ ಸ್ಟೇಡಿಯಂಗಾಗಿ ೪೨ ಎಕರೆ ಭೂಮಿ ನೀಡಲಾಗಿದೆ. ತುಮಕೂರು ಜಿಲ್ಲೆ ಭವಿಷ್ಯದಲ್ಲಿ ಅಂತರಾಷ್ಟಿçÃಯ ಮಟ್ಟದಲ್ಲಿ ಬೆಳೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಹೇಮಾವತಿ ಯೋಜನೆಯಡಿ ೧೮ ರಿಂದ ೨೦ ಟಿಎಂಸಿ ನೀರು ಜಿಲ್ಲೆಗೆ ಒದಗಿಸಲಾಗುತ್ತಿದೆ ಎಂದು ಹೇಳಿದರು.
ತುಮಕೂರನ್ನು ಕೈಗಾರಿಕೆ, ಶಿಕ್ಷಣ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ವೆAಕಟೇಶ್ವರಲು ಮತ್ತು ಕಾಸಿಯಾ ಸಂಘದ ಪದಾಧಿಕಾರಿಗಳು ಇದ್ದರು.
