ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ, ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೀದರ್ ಜಿಲ್ಲೆಯಿಂದ
ವರದಿ-ನಾಗರಾಜು ಹಿರಿಯ ಸಾಹಿತಿ ಪತ್ರಕರ್ತರು
